ಬೆಂಗಳೂರಿಗೆ ಹೊರಡುವ ಬಹುತೇಕ ನಿರುದ್ಯೋಗಿಗಳ ಚಿಂತೆ ಕೆಲಸ ಸಿಗುತ್ತದಾ ? ಎನ್ನುವುದಕ್ಕಿಂತ ಉಳಿಯಲು ಕೊಠಡಿ ಸಿಗುತ್ತದಾ ? ಎನ್ನುವುದು. ಕಾರಣ ಪುಡಿಗಾಸು ಇಟ್ಟುಕೊಂಡು ಹೊರಡುವ ಹುಡುಗರು (ಬಹುತೇಕ ಹುಡುಗಿಯರು ಅದರಲ್ಲಿ ಜಾಣೆಯರು. ಕೆಲಸ , ಕೋಣೆಯನ್ನು ಖಚಿತ ಪಡಿಸಿಕೊಂಡೇ ಹೊರಡುತ್ತಾರೆ.! ) ಸ್ವಂತದ ಕೋಣೆ ಬಾಡಿಗೆ ಪಡೆಯುವಷ್ಟು ಶಕ್ತಿಯಿರುವುದಿಲ್ಲ. ಹಾಗಾಗಿ ಬೆಂಗಳೂರಿಗೆ ಕೆಲಸ ಹುಡುಕಿ ಹೊರಡುವುದು ಒಂದು ರೀತಿಯ ಅನಿಶ್ಚಿತತೆಯ ಪ್ರಯಾಣ. ಇನ್ನು ಈ ಪ್ರಾಣಿ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದೆ ಎಂಬ ಮಾಹಿತಿ ಮೊದಲೇ ಬೆಂಗಳೂರಿಗೆ ಹೋಗಿ ಸೇರಿಕೊಂಡವರಿಗೆ ತಿಳಿದರೆ ಅವರು ಸತ್ತರೂ ಫೋನ್ ರಿಸೀವ್ ಮಾಡುವುದಿಲ್ಲ. ಇನ್ನು ಕೆಲವರು ಕರೆ ಮಾಡಿದಾಗಲೆಲ್ಲಾ ರೂಮಿಗೇ ಬರದೇ ಹಗಲೂ ರಾತ್ರಿ ಡ್ಯೂಟಿ ಮಾಡುತ್ತಲೇ ಇರುತ್ತಾರೆ.! ಬಹುತೇಕ ಹುಡುಗರಿಗೆ ಸುಳ್ಳಿನ ಸರಪಳಿ ಅನಿವಾರ್ಯವಾಗಿದ್ದರೆ ಇನ್ನು ಕೆಲವರಿಗೆ ಊರಿನ ಮತ್ತೊಂದು ಮಿಕ ಬೆಂಗಳೂರು ಸೇರಿ ಉದ್ದಾರಾಗುವುದು ಹೊಟ್ಟೆ ಉರಿಯ ಮ್ಯಾಟರ್ರು. ಬೆಂಗಳೂರಿಗೆ ಹೋದ ಹೊಸತು. ಹೋಗುವ ಮೊದಲು ನಾಗಮಂಗಲ ಕಡೆಯ ಗೆಳೆಯನೊಬ್ಬನ ಕೋಣೆಯನ್ನು ಖಚಿತ ಪಡಿಸಿಕೊಂಡಿದ್ದೆ. 'ಅಯ್ಯೋ ಬಾ ಮಗಾ ನಾನಿದೀನಿ...' ಎಂದು ಥೇಟ್ ಕೃಷ್ಣ ಪರಮಾತ್ಮನ ಶೈಲಿಯಲ್ಲಿ ಅಭಯ ನೀಡಿದ್ದ. ಹೋಗಿ ಇಳಿದ ನಂತರ ಆ ದರವೇಸಿಗೆ ಅದೇನಾಯ್ತೋ ಮುಖ ಗಂಟು ಹಾಕಿಕೊಂಡೇ ಸುಂಕದ ಕಟ್ಟೆಯಾಚೆಗಿನ ಅವನ ಮನ...
ಈಗೊಂದು ಎಂಟ್ಹತ್ತು ವರ್ಷಗಳ ಹಿಂದಿನ ಆಚೆಯ ದಿನಗಳಲ್ಲಿ ಅದೆಂತಹುದೇ ಬಿಸಿಲಿದ್ದರೂ, ತಾಪಮಾನವಿದ್ದರೂ ನೀರಿಗೆ ಬವಣೆ ಪಡಬೇಕಿರಲಿಲ್ಲ. ಬೇಸಿಗೆಯಲ್ಲೂ ಸಹ ಹೊಳೆಯಲ್ಲಿ ಸಾಕಷ್ಟು ನೀರು ಹರಿಯುತ್ತಿತ್ತು, ಗದ್ದೆ ಬಯಲಿನ ನಡುವೆ, ಆಚೀಚಿನ ಬದಿಗಳಲ್ಲಿ ಹರಿದು ಹೊಳೆ ಸೇರುವ ಸಣ್ಣ ಹಳ್ಳ/ತೊರೆಗಳು ಸಣ್ಣದಾಗಿಯಾದರೂ ಹರಿದು ಹೊಳೆಯ ನೀರು ಬತ್ತದಂತೆ ನೋಡಿಕೊಳ್ಳುತ್ತಿದ್ದವು. ಹಾಗಿದ್ದರೆ ಈಗೇನಾಯ್ತು...? ಮಲೆನಾಡಿನಲ್ಲಿ ಇವತ್ತು ನೀರಿನ ಹರಿವು ಕಡಿಮೆಯಾಗಲು ಎರಡು ಮುಖ್ಯ ಕಾರಣಗಳಿವೆ. ಮೊದಲನೆಯದು ಈ ಮೊದಲಿನಂತೆ ಜೂನ್ ಮೊದಲವಾರದಿಂದಲೇ ಗಾಳಿ ಸಮೇತ ಹೊಡೆಯುವ ಮಳೆ ಇತ್ತೀಚೆಗೆ ಹದ ತಪ್ಪಿರುವ ಮಾನ್ಸೂನಿನ ಏರಿಳಿತದಿಂದಾಗಿ ಜುಲೈ ಮಧ್ಯದಲ್ಲಿ ಬರಲು ಪ್ರಾರಂಭಿಸಿದೆ. ಅಲ್ಲಿಗೆ ಅರ್ಧ ಮಳೆಗಾಲವೇ ಕಳೆದುಹೋಗಿರುತ್ತದೆ. ಇದರ ಪರಿಣಾಮವಾಗಿ ಜಲಮೂಲಗಳು recharge(ಮರುಪೂರಣ)ಆಗುತ್ತಿಲ್ಲ. ಬಲವಾದ ಗಾಳಿ ಸಮೇತ ಹೊಡೆಯುವ ಮಳೆ ಜಲದ ಕಣ್ಣುಗಳನ್ನು ತೆರೆಯುತ್ತದೆ ಎನ್ನುವ ಮಾತು ಮಲೆನಾಡಿನಲ್ಲಿದೆ. ಅದು ನಿಜವೂ ಕೂಡಾ... ಜುಲೈ ಕಳೆದ ನಂತರ ಅದೆಷ್ಟೇ ಮಳೆ ಸುರಿದರೂ ಘಟ್ಟದ ಬುಡದಲ್ಲಿರುವ ಜಲಪಾತಗಳಲ್ಲಿ ನೀರು ಧಾರಾಕಾರವಾಗಿ ಸುರಿದು ಹೋಗುತ್ತದೆಯೇ ಹೊರತು ಅಂತರ್ಜಲ ವೃದ್ದಿಯಾಗುವುದಿಲ್ಲ. ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಸುರಿದ ಮಳೆ ಹೊಳೆಯಲ್ಲಿ ಕೊಚ್ಚಿಹೋಗಿ ಅಣೆಕಟ್ಟೆಗಳನ್ನು ಸೇರಿತೇ ಹೊರತು ಅಂತರ್ಜಲ ಒಂದಿಂಚೂ ಹೆಚ್ಚಾಗಿರಲಾರದು ಬಹುಶಃ. ಎರಡನೇ ಮುಖ್ಯ...