Coffee blossoms in Brazil. An anti Nature cultivation. ಕೆಲವು ವರ್ಷಗಳ ಹಿಂದೆ ನಮ್ಮ ಚಿಕ್ಕಮಗಳೂರಿನ ಸುತ್ತಮುತ್ತಲಿನಲ್ಲಿ ಕೆಲವರು ಬ್ರೆಜಿಲ್ ಮಾದರಿಯ ಕಾಫಿ ಬೆಳೆಯುತ್ತೇವೆಂದು ಓಡಾಡತೊಡಗಿದರು. ಬ್ರೆಜಿಲ್ ಮಾದರಿಯಲ್ಲಿ ಕಡಿಮೆ ಖರ್ಚು, ಕಾರ್ಮಿಕರಹಿತವಾಗಿ ಯಂತ್ರಗಳ ಮೂಲಕ ಕುಯ್ಲು ಹಾಗೂ ಕಂಡು ಕೇಳರಿಯದಷ್ಟು ಇಳುವರಿಯಂತೆ...! ಎಂಬೆಲ್ಲಾ ಮಾತುಗಳು ಹರಿದಾಡತೊಡಗಿದವು. ಬ್ರೆಜಿಲ್ ಮಾದರಿಯೆಂದರೆ ಹೆಂಗೆ ಬೆಳೆಯುತ್ತಾರೆ !? ಒಮ್ಮೆ ಹೋಗಿ ನೋಡಬೇಕೆಂಬ ಕುತೂಹಲ ಪ್ರಾರಂಭವಾಯಿತು. ಒಂದು ದಿನ ಕಳಸಕ್ಕೆ ಹೋಗುತ್ತಿರುವಾಗ ಬಾಳೆಹೊಳೆಯ ಬಳಿ ತುಂಬಾ ಹಳೆಯ ರೋಬಸ್ಟಾ ತೋಟವೊಂದನ್ನು ಮರಗಳ ಸಮೇತ ಕಡಿದು ಬಟಾಬಯಲಾಗಿಸಿ ಸಾಲು ಸಾಲು ಪಾತಿಗಳಂತೆ ಮಾಡಿ ಒಂದರ ಪಕ್ಕ ಒಂದರಂತೆ ಗಿಡಗಳನ್ನು ನೆಟ್ಟು ಹನಿ ನಿರಾವರಿ ಪೈಪುಗಳನ್ನು ಎಳೆಯುತ್ತಿದ್ದರು. ನೋಡಲು ಒಂದು ನಮೂನೆಯ ಟೀ ತೋಟದ ಮಾದರಿಯಲ್ಲಿತ್ತು. ಚಹಾ ತೋಟದಲ್ಲಾದರೂ ನಡುವೆ ಅಲ್ಲಲ್ಲಿ ಮರಗಳಿರುತ್ತವೆ ಇಲ್ಲಿ ಒಂದೇ ಒಂದು ಮರವನ್ನೂ ಬಿಡದಂತೆ ಕಡಿದುಹಾಕಿದ್ದರು.! ತೋಟದ ಸಮೀಪದಲ್ಲಿದ್ದ ಅಂಗಡಿಯೊಂದರಲ್ಲಿ, ಇದೇನು ಬೆಳೆಸುತ್ತಿದ್ದಾರೆ ? ಎಂದು ವಿಚಾರಿಸಿದೆ. 'ಎಂತದಾ ಬ್ರೆಜಿಲ್ ಕಾಪಿ ಬೆಳಿತಾರಂತೆ ಮಾರ್ರೆ ಭಯಂಕರ ಕಾಪಿ ಬಿಡ್ತದಂತೆ ಇನ್ಮೇಲೆ ಮಿಸಿನ್ನಲ್ಲಿ ಹಣ್ ಕುಯ್ಯದಂತೆ' ಎಂದರು. ಕೆಲವೇ ದಿನಗಳ ಹಿಂದೆ ಯಾವ ಬ್ರೆಜಿಲ್ ಮಾದರಿಯನ್ನು ನೋಡಬೇಕೆ...